ಒಗಟುಗಳು

1.ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ=ಕಣ್ಣು

2. ಕಾಸಿನ ಕುದುರೆಗೆ ಬಾಲದ ಲಗಾಮು =ಸೂಜಿ ದಾರ

3. ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ ,  ಬೆಳೆಯಿಲ್ಲ ಮೈ ಹಸಿರಾಗಿದೆ=ಗಿಳಿ

4. ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ  ಮುಚ್ಚಿದರೆ ಹಾನಿ ಇದೇನು?=ಮೂಗು

5. ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?=ಮೊಟ್ಟೆ

6. ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು? =ಕೋಳಿ

7. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?=ರೈಲು

8. ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ=ಗಡಿಯಾರ

9. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ=ಕಲ್ಲಂಗಡಿ ಹಣ್ಣು

10. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ=ತೆಂಗು

11. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ=ನೀರು

12.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ=-ದಾರಿ

13. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.=ಯುಗಾದಿ

14. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ
   ಹಾಕಿರುತ್ತೆ       =  ಬದನೆಕಾಯಿ.

15. ಸಾಗರ ಪುತ್ರ ,ಸಾರಿನ ಮಿತ್ರ.=ಉಪ್ಪು

16. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.=ಅಕ್ಕಿ

17. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.=ನವಿಲು.

18. ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.=ನದಿ

19. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.=ಕೋಳಿ

20. ಮೋಟು ಗೋಡೆ ಮೇಲೆ, ದೀಪ ಉರೀತಿದೆ.=ಮೂಗುಬೊಟ್ಟು

21. ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.=ನೆರಳು

22. ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ=ಗಾಣ

23. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ=ಶ್ಯಾವಿಗೆ

24. ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು=ತೆಂಗಿನಕಾಯಿ

25. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ=ತಂಬೂರಿ

26. ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ=ಕಪ್ಪೆ

27. ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ=ಕಸಪೊರಕೆ

28. ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು=ಉಪ್ಪು

29. ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?=ನಕ್ಷೆ

30.ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.  =ಅನ್ನದ ಅಗುಳು.

31. ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.  =ಸಾಬೂನು.

32. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.  =ಬದನೆಕಾಯಿ.

33. ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.=ನೀರು

34. ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.=ಎಣ್ಣೆ ದೀಪ.

35. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.
   = ಬಾಳೆ ಹಣ್ಣು.

36. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.=ಕನ್ನಡಿ .

37. ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು? =ದತ್ತುರಿಯ ಮುಳ್ಳು.

38. ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.=ಕಮಲ.

39. ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.=ಗಿರಣಿ

40. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.    = ದುಡ್ಡು.

41.ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.=ಸಗಣಿ.

42. ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.= ಗರಗಸ.

43. ಕಡ್ಲೆ ಕಾಳಷ್ಟು ಹಿಂಡಿ ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.=ಹಲ್ಲುಪುಡಿ.

44. ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.        =   ಗಡಿಗೆಮಜ್ಜಿಗೆ.

45. ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .=ರೊಟ್ಟಿ, ದೋಸೆ

46. ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ,   ತಮ್ಮ ಇಳಿತ್ತಾನೆ= ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ

47. ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.=ಕಣ್ಣು.

48. ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.=ಬೆಣ್ಣೆ ಉಂಡೆ.

49.ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.=ಅಂಗಿ.

50.ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ=ಮಾವು

51. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ=ಬೆಕ್ಕು

52. ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ=ಕಪ್ಪೆ

53. ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು=ಸುಣ್ಣ

54. ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ=ದೀಪ

55. ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ=ಚಪ್ಪಲಿ

56. ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು=ನದಿ

57. ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ=ಮೇಡು

58. ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ=ಆಕಾಶ

59. ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ=ಜೋಳದ ದಂಟು

60. ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?
  =   ಸಾಲಿಗ್ರಾಮ

61.ಕರಿ ಹುಡುಗನಿಗೆ ಬಿಳಿ ಟೋಪಿ =ಹೆಂಡದ ಮಡಿಕೆ

62. ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು=ನಾಣ್ಯ

63. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.=ತಿಗಣೆ

64. ಕುದುರೆ ಬಾಲದಿಂದ ನೀರು ಕುಡಿಯುತ್ತದೆ=ಹೇನು

65. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.=ಸೀತ ಫಲ

66. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.=ಕಣ್ಣು

67. ಮನೆ ಮೇಲೆ ಮಲ್ಲಿಗೆ ಹೂವು.=ಮಂಜು

68. ಹಾರಿದರೆ ಹನುಮಂತ ಕೂಗಿದರೆ ಶಂಖ.=ಕಪ್ಪೆ

69. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.=ಸುಣ್ಣ

70.ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.=ಪೋಸ್ಟ್ ಕಾರ್ಡ್

71. ಬಿಳಿ ಕುದುರೆಗೆ ಹಸಿರು ಬಾಲ.=ಮೂಲಂಗಿ

72. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.=ಕುಂಕುಮ

73. ಬರೋದ ಕಂಡು ಕೈ ಒಡ್ತಾರೆ.=ಬಸ್

74. ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?=ಮೆಣಸಿನಕಾಯಿ

75. ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು=ಬೆಳ್ಳುಳ್ಳಿ

76. ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?     =ನಕ್ಷತ್ರ

77. ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ =ಎಲೆ ಅದಿಕೆ

78. ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ=ಬಾಳೆಲೆ

79. ಎರಡು ಬಾವಿಗಳ ನಡುವೆಯೊಂದು ಸೇತುವೆ=ಮೂಗು

80. ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ=ಕೋಟು ಅಂಗಿ

81. ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು =ವಿಷ

82. ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು =ಅಡಿಕೆ , ಸುಣ್ಣ

83.ಹೋಗೋದು ಮುಳುಗೋದು ತರೋದು ಏನು?=ಬಿಂದಿಗೆ


No comments:

Post a Comment